ತೋಟತ್ತಾಡಿ: ಇತಿಹಾಸ ಪ್ರಸಿದ್ಧ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ ಸೆ.22ರಂದು ದೇವಸ್ಥಾನದ ಪ್ರಧಾನ ಅರ್ಚಕ ದಿವಾಕರ್ ಭಟ್ ಪೌರೋಹಿತ್ಯದಲ್ಲಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಭಕ್ತರಿಗೆ ತೆನೆಯನ್ನು ವಿತರಿಸಿದರು.
ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಿವಾಕರ ಪೂಜಾರಿ ಕಳೆಂಜೊಟ್ಟು, ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಲೋಕಯ್ಯ ಪೂಜಾರಿ ಬರಮೇಲು, ಭಜನಾ ಮಂಡಳಿಯ ಅಧ್ಯಕ್ಷ ಕುಶಾಲಪ್ಪ ಗೌಡ ಆಗರಿ, ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳಾದ ಸನತ್ ಕುಮಾರ್ ಮೂರ್ಜೆ, ದಿನೇಶ್ ನಾಯ್ಕ ಕೋಟೆ, ಬಾಲಕೃಷ್ಣ ಗೌಡ ಪಾದೆ ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.