Site icon Suddi Belthangady

ಕೊರಿಂಜ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿಯ ಭಜನಾ ಕಾರ್ಯಕ್ರಮ

ಕೊರಿಂಜ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿಯ ಭಜನಾ ಕಾರ್ಯಕ್ರಮವನ್ನು ಯು. ತಿಲಕ್ ಅವರು ಉದ್ಘಾಟನೆ ಮಾಡಿದರು. ದೇವಸ್ಥಾನದ ಆಡಳಿತ ಮೋಕ್ತೇಸರ ಯೋಗೀಶ್ ಪೂಜಾರಿ ಕಡ್ತಿಲ ಸ್ವಾಗತಿಸಿದರು. ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪದ್ಮನಾಭ ಶಿಲ್ಪಿ, ಕಣಿಯೂರು ವಲಯದ ಜನಜಾಗೃತಿ ವೇದಿಕೆಯ ಅಧ್ಯಕ್ಷ ಪ್ರಪುಲ್ಲ ಚಂದ್ರ ಅಡ್ಯಂತಾಯ, ಕುಣಿತ ಭಜನಾ ತರಬೇತಿಯ ಗುರು ನಾಗೇಶ ನೆರಿಯ, ವಕೀಲ ಮನೋಹರ್ ಕುಮಾರ್ ಇಳಂತಿಲ ಉಪಸ್ಥಿತರಿದ್ದರು.

ಕೊರಿಂಜ ಶ್ರೀ ಪಂಚಲಿಂಗೇಶ್ವರ ಮಹಿಳಾ ಭಜನಾ ಮಂಡಳಿ ಹಾಗೂ ಪಂಚಲಿಂಗೇಶ್ವರ ಚಿನ್ನರ ಬಳಗದವರಿಂದ ಭಜನಾ ಕಾರ್ಯಕ್ರಮ ನಡೆಯಿತು. ನವರಾತ್ರಿ ಉತ್ಸವ ಸಮಿತಿಯ ಅಧ್ಯಕ್ಷ ಸೀತಾರಾಮ ಆಳ್ವ ಕೊರಿಂಜ ಕಾರ್ಯಕ್ರಮ ನಿರೂಪಿಸಿ, ರಂಜಿತ್ ಧರ್ಮಾಡಿ ಧನ್ಯವಾದ ಮಾಡಿದರು.

Exit mobile version