ಬೆಳ್ತಂಗಡಿ: ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್, ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು, ಮಂಗಳೂರು ಅತ್ತಾವರ ಕೆ.ಎಂ.ಸಿ ಬ್ಲಾಕ್ ಸೆಂಟರ್, ಬೆಳ್ತಂಗಡಿ ರೋಟರಿ ಕ್ಲಬ್, ಯುನೈಟ್ ಫಾರ್ ಗುಡ್, ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ರೆಡ್ ರಿಬ್ಬನ್ ಕ್ಲಬ್ ಇವುಗಳ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಸೆ. 23ರಂದು ಜರುಗಿತು.
ಬೆಳ್ತಂಗಡಿ ಶ್ರೀ ಗುರುದೇವ ಎಜುಕೇಶನ್ ಟ್ರಸ್ಟ್ ಅಧ್ಯಕ್ಷೆ ಪ್ರೀತಿತ ಧರ್ಮವಿಜೇತ್ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು. ಕೆ.ಎಂ.ಸಿ ಅತ್ತವರ ವೈದ್ಯಾಧಿಕಾರಿ ಡಾ. ಐಶ್ವರ್ಯ ಸತ್ಯನಾಥನ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪ್ರೊ. ಪ್ರಕಾಶ್ ಪ್ರಭು, ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲೆ ಡಾ. ಸವಿತಾ, ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಉಪಸ್ಥಿತರಿದ್ದರು.
ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಎನ್. ಎಸ್. ಎಸ್ ಕಾರ್ಯಕ್ರಮ ಅಧಿಕಾರಿ ಬಿ.ಎ. ಶಮಿವುಲ್ಲ ಸ್ವಾಗತಿಸಿ, ಉಪನ್ಯಾಸಕಿ ಸೌಮ್ಯ ನಿರೂಪಿಸಿ, ಉಪನ್ಯಾಸಕ ಸತೀಶ್ ವಂದಿಸಿದರು.