ಉಜಿರೆ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಆಶಯದಂತೆ ಸ್ವಚ್ಛ, ಸುಂದರ ಮತ್ತು ಆರೋಗ್ಯ ಭಾರತದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಸ್ವಚ್ಛತಾ ಹೀ ಸೇವಾ 2025ರ ಅಂಗವಾಗಿ ಉಜಿರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅತ್ತಾಜೆ ಅಮೃತ ಸರೋವರದಲ್ಲಿ ಸೆ. 23ರಂದು ಸ್ವಚ್ಚೋತ್ಸವ, ಬೃಹತ್ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾನ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಬಾರಿ, IAS ಭಾಗವಹಿಸಿ ಅಭಿಯಾನಕ್ಕೆ ಚಾಲನೆಯನ್ನು ನೀಡಿದರು.
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ರಾಷ್ಟ್ರೀಯ ಸೇವಾ ಯೋಜನೆಯ ಮುಖ್ಯಸ್ಥ ಡಾ .ಮಹೇಶ್ ಕುಮಾರ್ ಶೆಟ್ಟಿ ಹೆಚ್. ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳು ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಘಟಕದಿಂದ ಬೆಳ್ತಂಗಡಿ ತಾಲೂಕಿನಾದ್ಯಂತ ಸೇವಾ ಸಂಭ್ರಮ ಒಂದು ವಾರದ ವಿಶೇಷ ಸೇವಾ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಿತ್ತಿಪತ್ರವನ್ನು ಅನಾವರಣಗೊಳಿಸಿ ಅಧಿಕೃತ ಚಾಲನೆಯನ್ನು ನೀಡಿದರು.
ಈ ಅಭಿಯಾನದ ಅಧ್ಯಕ್ಷತೆಯನ್ನು ಉಜಿರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ವಹಿಸಿದರು. ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಗ್ರಾಮೀನಾ ಕುಡಿಯುವ ನೀರು ನೈರ್ಮಲ್ಯ. ಸಹಾಯಕ ಕಾರ್ಯಪಾಲಕ ಅಭಿಯಂತ ವಿಜಯಶಂಕರ್, ಪ್ರೇರಣಾ ಸಂಜೀವಿನಿ ಒಕ್ಕೂಟದ ಸದಸ್ಯರು, ಉಜಿರೆ ವರ್ತಕರ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉತ್ಸಾಹದಿಂದ ಪಾಲ್ಗೊಂಡರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಸ್ವಾಗತಿಸಿ ಪ್ರಸ್ತಾವಿಕ ನುಡಿಗಳನ್ನು ಮಾತನಾಡಿದರು. ಬಳಿಕ ಸ್ವಚ್ಛತೆಯೇ ಸೇವೆ- 2025ರ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಅತ್ತಾಜೆ ಅಮೃತ ಸರೋವರದ ಸುತ್ತ ಮುತ್ತ ಸಂಪೂರ್ಣ ಸ್ವಚ್ಛಗೊಳಿಸಿ, ಅತ್ತಾಜೆ ಸರೋವರವನ್ನು ಪ್ರವಾಸಿ ತಾಣವನ್ನಾಗಿ ಪರಿವರ್ತಿಸಲಾಯಿತು. ಉಜಿರೆ ಗ್ರಾಮ ಪಂಚಾಯತ್ ಕಾರ್ಯದರ್ಶಿ ಶ್ರವಣ್ ಕುಮಾರ್, ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗದವರು, ಸ್ವಚ್ಛತಾ ಸಿಬ್ಬಂದಿಗಳು ಕಾರ್ಯಕ್ರಮಕ್ಕೆ ಸಹಕರಿಸಿದರು. ಗ್ರಾಮ ಪಂಚಾಯತಿ ಉಪಾಧ್ಯಕ್ಷರು ರವಿ ಕುಮಾರ್ ಅವರು ವಂದಿಸಿದರು.