ಶಿಶಿಲ: 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಪಂಚಾಯತ್ ಅಧ್ಯಕ್ಷ ಸುಧೀನ್ ಡಿ. ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸೆ. 24ರಂದು ನಡೆಯಿತು.
ಮಾರ್ಗದರ್ಶಿ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಧನಂಜಯ್ ಭಾಗವಹಿಸಿದ್ದರು. ವೇದಿಕೆಯಲ್ಲಿ ಪಂಚಾಯತ್ ಉಪಾಧ್ಯಕ್ಷ ಯಶೋಧರ್ ಕೆ.ವಿ., ಪಂಚಾಯತ್ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಪಂ.ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ. ಸ್ವಾಗತಿಸಿ, ಸಿಬ್ಬಂದಿ ಮನೋಜ್ ಜಮಾ-ಖರ್ಚು ಮಂಡಿಸಿದರು. ಗ್ರಾಮಸಭೆಗೆ ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು. ಗುಮಾಸ್ತ ಸುಂದರ ಅವರು ವರದಿ ಅನುಪಾಲನ ವರದಿ ಮಂಡಿಸಿ ಧನ್ಯವಾದವಿತ್ತರು.