ಸುಲ್ಕೇರಿ : ಜಲ್ ಜೀವನ್ ಮಿಷನ್ ಯೋಜನೆಯಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾವರ ಗ್ರಾಮವು ದ.ಕ. ಜಿಲ್ಲೆಯಲ್ಲೇ ಪ್ರತಿ ಮನೆಗೂ ದಿನದ 24 ಗಂಟೆಯೂ ಪೂರ್ತಿ ನೀರು ಸರಬರಾಜು ಮಾಡುವ ಪ್ರಥಮ ಗ್ರಾಮವಾಗಿದೆ ಎಂದು ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ ಹೇಳಿದರು.

ಅವರು ಸುಲ್ಕೇರಿ ಗ್ರಾಮ ಪಂಚಾಯತ್ ನ ನಾವರ ಗ್ರಾಮದ 24/7 ನೀರು ಸರಬರಾಜು ಗ್ರಾಮವೆಂದು ಘೋಷಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಗಿರಿಜಾ ವಹಿಸಿದ್ದರು. ವೇದಿಕೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಜೈ ಪ್ರಕಾಶ್ ಸಿ., ತಾ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ಎನ್., ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿಜಯ ಕುಮಾರ್ ಉಪಸ್ಥಿತರಿದ್ದರು.

ಪಂಚಾಯತ್ ಪಿಡಿಓ ಗಾಯತ್ರಿ ಪಿ. ಸ್ವಾಗತಿಸಿದರು. ಕಾರ್ಯದರ್ಶಿ ಕೊರಗಪ್ಪ ನಾಯ್ಕ, ಸದಸ್ಯರು, ಸಿಬ್ಬಂದಿಗಳು ಸಹಕರಿಸಿದರು. ಉಪಾಧ್ಯಕ್ಷ ಶುಭಕರ ಪೂಜಾರಿ ವಂದಿಸಿದರು.