ಮಾಲಾಡಿ: ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

0

ಮಾಲಾಡಿ: ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹವನ್ನು ಸೆ. 22ರಂದು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಜ್ಯೋತಿ ವಹಿಸಿದ್ದರು. ಪಂಚಾಯತ್ ಸದಸ್ಯೆ ಬಾಲ ವಿಕಾಸ ಸಮಿತಿಯ ಸದಸ್ಯೆ ತುಳಸಿ ಉಮೇಶ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಮಾಲಾಡಿ ಆರೋಗ್ಯ ಸುರಕ್ಷಾಧಿಕಾರಿ ಪ್ರಿಯಾ ಅವರು ಪೌಷ್ಟಿಕ ಆಹಾರದ ಬಗ್ಗೆ, ಗರ್ಭಿಣಿ ಬಾಣಂತಿಯರ ಪೌಷ್ಟಿಕ ಆಹಾರ, ಆರೋಗ್ಯ ತಪಾಸಣೆ, ಸಮತೋಲನ ಆಹಾರ ಬಳಕೆ, ಹಸಿರು ಸೊಪ್ಪು ತರಕಾರಿಗಳ ಬಗ್ಗೆ, ಜೀವಸತ್ವಗಳ ಬಗ್ಗೆ, ಕುಟುಂಬ ಯೋಜನೆಯ ಬಗ್ಗೆ, ಅವರಿಗೆ ಸಿಗುವಂತಹ ಸೌಲಭ್ಯಗಳಾದ ಮಾತ್ರವಂದನ, ಭಾಗ್ಯಲಕ್ಷ್ಮಿಗಳ ಬಗ್ಗೆ ಉತ್ತಮ ಮಾಹಿತಿಯನ್ನು ನೀಡಿದರು. ಹಾಗೂ ಕಾರ್ಯಕ್ರಮದಲ್ಲಿ ಓರ್ವ ಗರ್ಭಿಣಿ ಮಹಿಳೆಗೆ ಸೀಮಂತನ ಶಾಸ್ತ್ರ ಮತ್ತು ಆರು ತಿಂಗಳ ಒಳಗಿನ ಇಬ್ಬರು ಮಕ್ಕಳಿಗೆ ಅನ್ನಪ್ರಾಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಕೊನೆಯಲ್ಲಿ ಸ್ತ್ರೀಶಕ್ತಿ ಸದಸ್ಯರು, ಮಕ್ಕಳ ತಾಯಂದಿರು, ಆಶಾ ಕಾರ್ಯಕರ್ತರು ತಯಾರಿಸಿ ತಂದಂತಹ ವಿವಿಧ ಬಗೆಯ ಪೌಷ್ಟಿಕಾಂಶಯುಕ್ತ ಆಹಾರ ಪದಾರ್ಥಗಳನ್ನು ಎಲ್ಲರಿಗೂ ಹಂಚಲಾಯಿತು. ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಜಯಶ್ರೀ, ಆಶಾ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಸಂಘದ ಸದಸ್ಯರು, ಮಕ್ಕಳ ಹೆತ್ತವರು, ಅಂಗನವಾಡಿ ಸಹಾಯಕಿ ಹಾಗೂ ಪುಟಾಣಿ ಮಕ್ಕಳು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಪ್ರಭಾವತಿ ಕಾರ್ಯಕ್ರಮ ಸ್ವಾಗತಿಸಿ, ನಿರೂಪಿಸಿ, ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here