ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ 71ನೇ ವನ್ಯಜೀವಿ ಸಪ್ತಾಹ ಆಚರಣೆಯನ್ನು ಕರ್ನಾಟಕ ಅರಣ್ಯ ಇಲಾಖೆ ಕುದುರೆಮುಖ ವನ್ಯಜೀವಿ ಭಾಗ ಕಾರ್ಕಳ ವನ್ಯಜೀವಿ ವಲಯ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ 71ನೇ ವನ್ಯಜೀವಿ ಸಪ್ತಾಹ ಆಚರಣೆ ಅಂಗವಾಗಿ ಪ್ರಾಥಮಿಕ ಶಾಲೆ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಅರಣ್ಯ ಇಲಾಖೆ ರೇಂಜ್ ಫಾರೆಸ್ಟ್ ಆಫೀಸರ್ ಶರ್ಮಿಷ್ಟ ನಡೆಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗುರುದೇವ ಎಜುಕೇಶನ್ ಟ್ರಸ್ಟ್ ರಿಜಿಸ್ಟರ್ ಅಧ್ಯಕ್ಷೆ ಪ್ರೀತಿತಾ ಧರ್ಮ ವಿಜೇತ್ ವಹಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಉಪ ಅರಣ್ಯಾಧಿಕಾರಿ ರವೀಂದ್ರ, ಮ್ಯಾಥ್ಯೂ, ಭರತ್ ಉಪಸಿತರಿದ್ದರು.
ಸುಮಾರು 75 ಶಾಲೆಗಳಿಂದ ಸ್ಪರ್ಧಾರ್ಥಿಗಳು ಭಾಗವಹಿಸಿ ಬಹುಮಾನವನ್ನು ಗಳಿಸಿದರು. ಬಹುಮಾನ ಪಟ್ಟಿಯನ್ನು ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಸುಷ್ಮಾ ವಾಚಿಸಿದರು. ಕಾಲೇಜಿನ ಉಪ ಪ್ರಾಂಶುಪಾಲ ಬಿ.ಎ. ಶಮೀವುಲ್ಲ ಸ್ವಾಗತಿಸಿದರು. ಕನ್ನಡ ಭಾಷಾ ಉಪನ್ಯಾಸಕ ರಾಕೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಇತಿಹಾಸ ವಿಭಾಗದ ಉಪನ್ಯಾಸಕ ಹರೀಶ್ ಪೂಜಾರಿ ವಂದಿಸಿದರು.