ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಂಡಲದಿಂದ ಅಪ್ರತಿಮ ಸಂಘಟಕ, ಏಕಾತ್ಮ ಮಾನವತೆಯ ಪ್ರತಿಪಾದಕರು, ಅಗ್ರಪಂಕ್ತಿಯ ಲೇಖಕರು, ರಾಷ್ಟ್ರವಾದಿ, ದಾರ್ಶನಿಕರು, ಮಾರ್ಗದರ್ಶಕರು ಜನ ಸಂಘದ ಸಂಸ್ಥಾಪಕ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆಯನ್ನು ಸೆ.25ರಂದು ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು.
ದೀನ್ ದಯಾಳ್ ಉಪಾಧ್ಯಾಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಸಿಹಿ ಹಂಚಲಾಯಿತು. ಬೆಳ್ತಂಗಡಿ ಬಿಜೆಪಿ ಮಂಡಲಾಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ ಅವರು ದೀನ್ ದಯಾಳ್ ಉಪಾಧ್ಯಾಯರ ವ್ಯಕ್ತಿತ್ವ, ಸಾಧನೆಗಳ ಬಗ್ಗೆ ಸಂದರ್ಭೋಚಿತವಾಗಿ ಮಾತಾಡಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಪ್ರಜ್ವಲ್, ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಗಣೇಶ್ ಗೌಡ ನಾವೂರು, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸೇವಾ ಪಾಕ್ಷಿಕದ ಸಂಚಾಲಕಿ ಪೂರ್ಣಿಮಾ ಜಯಂತ್, ಮಂಡಲ ಕಾರ್ಯದರ್ಶಿಗಳಾದ ಸುಂದರ್ ಹೆಗ್ಡೆ, ಆಶಾ ಲಾಯಿಲ, ಪ್ರಭಾಕರ ಆಚಾರ್, ನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ರಾಜೇಶ್ ಪ್ರಭು, ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಾಯಿಲ ಹಾಗೂ ಪ್ರಮುಖರು ಉಪಸ್ಥಿತರಿದ್ದರು. ಪೂರ್ಣಿಮಾ ಜಯಂತ್ ಸ್ವಾಗತಿಸಿ, ಜಯಾನಂದ ಗೌಡ ಪ್ರಜ್ವಲ್ ಧನ್ಯವಾದವಿತ್ತರು.