Site icon Suddi Belthangady

ಶಂಕರ ಗ್ರೂಪ್ ನ ಮೇಘ ಫ್ರೂಟ್ ಪ್ರೊಸೆಸಿಂಗ್ ಪ್ರೈವೆಟ್ ಲಿಮಿಟೆಡ್ ಬಿಂದು ಗೆ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ಹಾಗೂ ಪದವಿಪೂರ್ವ ವಿಭಾಗದ ವಿದ್ಯಾರ್ಥಿಗಳು ಸೆ. 25ರಂದು ಪುತ್ತೂರು ಶಂಕರ ಗ್ರೂಪ್ ನ ಮೇಘ ಫ್ರೂಟ್ ಪ್ರೊಸೆಸಿಂಗ್ ಪ್ರೈವೆಟ್ ಲಿಮಿಟೆಡ್ ಬಿಂದು ಕಂಪನಿಗೆ ಕೈಗಾರಿಕಾ ಅಧ್ಯಯನ ಪ್ರವಾಸ ಕೈಗೊಂಡರು.

ಈ ಕೈಗಾರಿಕಾ ಅಧ್ಯಯನ ಪ್ರವಾಸದಲ್ಲಿ ಒಟ್ಟು 77ವಿದ್ಯಾರ್ಥಿಗಳು ಭಾಗವಹಿಸಿದ್ದು, ಅಲ್ಲಿನ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳನ್ನು ಮೂರು ಗುಂಪುಗಳಾಗಿ ವಿಂಗಡಿಸಿ, ವಿದ್ಯಾರ್ಥಿಗಳಿಗೆ ಕೈಗಾರಿಕೆಯ ಕಾರ್ಯವಿಧಾನದ ಬಗ್ಗೆ ಉತ್ತಮವಾದ ಮಾಹಿತಿಯನ್ನು ನೀಡಿದರು.

ಈ ಕೈಗಾರಿಕ ಅಧ್ಯಯನ ಪ್ರವಾಸದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಸಂಸ್ಥೆಯ ಸಂಯೋಜಕರಾದ ಯಶವಂತ ಜಿ. ನಾಯಕ್ ಹಾಗೂ ಇಂಗ್ಲೀಷ್ ಉಪನ್ಯಾಸಕರಾದ ಸುಭಕರ್ ಇವರು ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು. ಕೈಗಾರಿಕೆಯ ಕಾರ್ಯವಿಧಾನ, ಉತ್ಪಾದನಾ ಕ್ರಮ ಮತ್ತು ನವೀನ ತಂತ್ರಜ್ಞಾನಗಳ ಬಗ್ಗೆ ವಿದ್ಯಾರ್ಥಿಗಳು ನೇರವಾಗಿ ಅವಲೋಕನ ನಡೆಸಿ ಪಾರದರ್ಶಕ ಜ್ಞಾನವನ್ನು ಸಂಪಾದಿಸಿದರು.

ಇಂತಹ ಅಧ್ಯಯನ ಪ್ರವಾಸಗಳು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರಕವಾಗಿದ್ದು, ಭವಿಷ್ಯದ ವೃತ್ತಿಜೀವನಕ್ಕೆ ಮಾರ್ಗದರ್ಶಕವಾಗುತ್ತದೆ ಎಂದು ಎಲ್ಲರೂ ಅಭಿಪ್ರಾಯಪಟ್ಟರು .

Exit mobile version