ಬೆಳ್ತಂಗಡಿ: 2024-25ನೇ ಸಾಲಿನಲ್ಲಿ ಪದ್ಮುಂಜ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅತ್ಯಧಿಕ ಮೌಲ್ಯದ ಕೃಷಿ ಯಂತ್ರೋಪಕರಣಗಳನ್ನು ಖರೀದಿಸಿ ಸಂಘದ ಸದಸ್ಯರಿಗೆ ವಿತರಿಸುವ ಸಹಕಾರಿ ಸಂಘಗಳಿಗೆ ಹಮ್ಮಿಕೊಳ್ಳಲಾಗಿದ್ದ ಸನ್ಮಾನಿಸುವ ಯೋಜನೆಯಲ್ಲಿ ಪದ್ಮುಂಜ ಕೃಷಿ ಪತ್ತಿನ ಸಹಕಾರ ಸಂಘವು ಬೆಳ್ತಂಗಡಿ ತಾಲೂಕು ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘ ಪುತ್ತೂರು ಶಾಖೆಯಲ್ಲಿ ಯಂತ್ರೋಪಕರಣಗಳನ್ನು ಖರೀದಿಸಿ “ಪ್ರಥಮ ಸ್ಥಾನ” ಗಳಿಸಿರುತ್ತದೆ.
ಸೆ.25ರಂದು ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ರಕ್ಷಿತ್ ಪಣಿಕ್ಕರ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಂಕಿತಾ ಬಿ. ಅವರನ್ನು ಸನ್ಮಾನಿಸಲಾಯಿತು.