Site icon Suddi Belthangady

ಉಜಿರೆ: ಎಸ್. ಡಿ.ಎಂ. ಪ. ಪೂ. ಕಾಲೇಜಿನಲ್ಲಿ ಡಾ.ಎಸ್.ಎಲ್ ಭೈರಪ್ಪರಿಗೆ ನುಡಿನಮನ

ಉಜಿರೆ: ಇತ್ತೀಚೆಗೆ ನಿಧನರಾದ ಕನ್ನಡದ ಮೇರು ಸಾಹಿತಿ ಡಾ. ಎಸ್ ಎಲ್ ಭೈರಪ್ಪನವರಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ವತಿಯಿಂದ ನುಡಿನಮನ ಕಾರ್ಯಕ್ರಮ ನಡೆಸಲಾಯಿತು. ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ. ಅವರು ಡಾ. ಎಸ್. ಎಲ್. ಭೈರಪ್ಪನವರು ಕನ್ನಡ ಸಾಹಿತ್ಯಕ್ಕೆ ನೀಡಿದ ಕೊಡುಗೆಗಳ ಬಗ್ಗೆ ಮಾತನಾಡಿ, ಭೈರಪ್ಪನವರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಕಾಲೇಜಿನ ಉಪಪ್ರಾಚಾರ್ಯ ಡಾ. ರಾಜೇಶ್ ಬಿ. ಮತ್ತು ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಡಾ. ಮಹಾವೀರ ಜೈನ್ ಕಾರ್ಯಕ್ರಮ ನಿರೂಪಿಸಿದರು .‌

Exit mobile version