Site icon Suddi Belthangady

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿ, ಚಂಡಿಕಾ ಯಾಗ

ನಾಳ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಅಂಗವಾಗಿ ಸೆ. 22ರಿಂದ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಭಜನಾ ಕಾರ್ಯಕ್ರಮಗಳು ನಡೆಯುತ್ತಿದ್ದು, ಸೆ. 26ರಂದು ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಬಾಲಕೃಷ್ಣ ಪಾಂಗಣ್ಣಾಯರವರ ಪೌರೋಹಿತ್ಯದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕ ವೇದಮೂರ್ತಿ ರಾಘವೇಂದ್ರ ಆಸ್ರಣ್ಣ ರವರ ಮಾರ್ಗದರ್ಶನದಲ್ಲಿ ಚಂಡಿಕಾಯಾಗ ಜರಗಿತು.

ಚಂಡಿಕಾಯಾಗದ ಪ್ರಯುಕ್ತ ಅನ್ನ ಸಂತರ್ಪಣೆ ಜರಗಿದ್ದು, ಗುರುವಾಯನಕೆರೆ ಎಕ್ಸೆಲ್ ವಿದ್ಯಾಸಂಸ್ಥೆಯ ಅಧ್ಯಕ್ಷ ಸುಮಂತ್ ಜೈನ್ ಅನ್ನ ಸಂತರ್ಪಣೆಯ ಸೇವೆಯನ್ನು ನೆರವೇರಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸೇರಿದಂತೆ ಹಲವಾರು ಗಣ್ಯರು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ಕುಮಾರ್ ಬಿ. ಮತ್ತು ಸದಸ್ಯರು, ಅಭಿವೃದ್ಧಿ ಸಮಿತಿ, ಶ್ರೀ ದುರ್ಗಾ ಮಾತೃ ಮಂಡಳಿ, ಭಜನಾ ಮಂಡಳಿಯ ಪದಾಧಿಕಾರಿಗಳು, ಸದಸ್ಯರು, ಊರವರು ಹಾಜರಿದ್ದು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Exit mobile version