Site icon Suddi Belthangady

ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ಆರತಿ ಅವರಿಗೆ ಸನ್ಮಾನ

ಬೆಳ್ತಂಗಡಿ: ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕಿ ಆರತಿ ಅವರು ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿಯನ್ನು ಪಡೆದಿದ್ದು ಸೆ.26ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಆರತಿ ಅವರನ್ನು ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ತಾಲೂಕು ಸಹಕಾರಿ ಸಂಘಗಳ ಹಿತರಕ್ಷಣಾ ವೇದಿಕೆಯ ಉಪಾಧ್ಯಕ್ಷ ಡಾ. ಕೆ ಜಯಕೀರ್ತಿ ಜೈನ್ ಅವರು ಸನ್ಮಾನಿಸಿದರು.

ಮುಖ್ಯಕಾರ್ಯನಿರ್ವಹಣಾಧಿಕಾರಿ ವತ್ಸಲಾ ಜ್ಯೋತಿರಾಜ್, ವಸಂತ ಸುವರ್ಣ ಸಲಹೆಗಾರರು, ನಿರ್ದೇಶಕ ಪ್ರಶಾಂತ್, ರಝಕ್, ವಾರಿಜ, ರತ್ನಾವತಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Exit mobile version