ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಿಂದ ನಡೆಸುತ್ತಿರುವ ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಸೆಕ್ಟರ್ಸ್ ರಿಫಾರ್ಮ್ಸ್ ವಿಷಯದ ಕುರಿತು ಸೆ.27ರಂದು ಮಾಹಿತಿ ಕಾರ್ಯಗಾರ ನಡೆಸಲಾಯಿತು.
ಈ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ದೀಕ್ಷಿತಾ ಹಾಗೂ ದೀಕ್ಷಿತಾ ಎ. ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ನಡೆದಿರುವ ನವೀನತೆಗಳು, ಡಿಜಿಟಲ್ ಬ್ಯಾಂಕಿಂಗ್ ಪ್ರಗತಿ, ಗ್ರಾಹಕರಿಗೆ ಲಭ್ಯವಾಗುತ್ತಿರುವ ಸೌಲಭ್ಯಗಳು ಮತ್ತು ಬ್ಯಾಂಕ್‌ಗಳ ಆರ್ಥಿಕ ಅಭಿವೃದ್ಧಿಯಲ್ಲಿನ ಪಾತ್ರವನ್ನು ವಿವರಿಸಿದರು. ಹಾಗೆಯೇ ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಹಾಗೂ ಖಾಸಗಿ ವಲಯದ ಬ್ಯಾಂಕ್‌ಗಳ ವೈಶಿಷ್ಟ್ಯತೆ, ಅವುಗಳ ಸಾಧನೆ ಹಾಗೂ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಸಮಗ್ರ ಚರ್ಚೆ ನಡೆಯಿತು.
ಈ ಕಾರ್ಯಾಗಾರದಲ್ಲಿ ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೋ, ಸಂಯೋಜಕ ಯಶವಂತ ಜಿ. ನಾಯಕ್, ಉಪನ್ಯಾಸಕರು ಉಪಸ್ಥಿತಿಯಲ್ಲಿದ್ದರು.