Site icon Suddi Belthangady

ಬೆಳ್ತಂಗಡಿ: ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಮಾಶಾಸನ ಹೆಚ್ಚಳ ಮತ್ತು ಮಹಿಳಾ ದೌರ್ಜನ್ಯ ಖಂಡಿಸಿ ಮನವಿ

ಬೆಳ್ತಂಗಡಿ: ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ನೇತೃತ್ವದಲ್ಲಿ ಇತ್ತೀಚೆಗೆ ರಾಜ್ಯ ಮತ್ತು ಜಿಲ್ಲೆಯ ಹಲವಾರು ಕಡೆಗಳಲ್ಲಿ ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ ತಪ್ಪಿತಸ್ಥರಿಗೆ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಶಾಶ್ವತವಾಗಿ ಜಾಮೀನು ನಿರಾಕರಿಸಬೇಕು. ಹಾಗೂ ವಿಧವಾ ವೇತನ ಮತ್ತು ವೃದ್ಧಾಪ್ಯ ವೇತನ ಹೆಚ್ಚಳ ಕುರಿತಂತೆ ಸೆ.26ರಂದು ಜಿಲ್ಲಾಧಿಕಾರಿಯವರಿಗೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಯವರಿಗೆ, ಮುಖ್ಯ ಮಂತ್ರಿಯವರಿಗೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಿಗೆ, ಕಂದಾಯ ಸಚಿವರಿಗೆ ಮನವಿ ಸಲ್ಲಿಸಲಾಯಿತು.

Exit mobile version