ಬೆಳ್ತಂಗಡಿ: ಶರನ್ನವರಾತ್ರಿ ಉತ್ಸವದ ನಾಲ್ಕನೇ ದಿನದಂದು ಕೂಷ್ಮಾಂಡಿನಿ ತಾಯಿಯ ಆರಾಧನೆಯನ್ನು ಅತ್ಯಂತ ಭಕ್ತಿ ಶ್ರದ್ಧೆಯಿಂದ ಶ್ರೀ ಧಾಮ ಮಾಣಿಲದಲ್ಲಿ ಆಚರಿಸಲಾಯಿತು. ಆ ಪ್ರಯುಕ್ತ ಪ್ರತಿ ದಿನ ಬೆಳಿಗ್ಗೆ ಲಕ್ಷ್ಮೀ ಪೂಜೆ, ಮಧ್ಯಾಹ್ನ ಕುಂಕುಮಾರ್ಚನೆ, ಚಂಡಿಕಾ ಹೋಮ, ಸಂಜೆ ದುರ್ಗಾ ನಮಸ್ಕಾರ ಪೂಜೆಯನ್ನು ಮಾಣಿಲದ ಮೋಹನದಾಸ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ನಿರಂತರ ನಡೆಸುತ್ತಾ ಬರಲಾಗುತ್ತಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದುರ್ಗಾ ಮಹಾ ಲಕ್ಷ್ಮೀ ದೇವಿಯ ಅನುಗ್ರಹಕ್ಕೆ ಪಾತ್ರರಾದರು. ಅ.3ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಗಳೊಂದಿಗೆ ನವರಾತ್ರಿ ಹಬ್ಬವನ್ನು ಆಚರಿಸಲಾಗುತ್ತಿದೆ.