ನೆರಿಯ: ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಲಿ ಹತ್ತು ವರ್ಷಗಳಿಂದ ತಲೆಮರಿಸಿಕೊಂಡಿದ್ದ ಪೆಟ್ರೋನೆಟ್ ಪೈಪ್ ಲೈನ್ ನಿಂದ ಪೆಟ್ರೋಲ್ ಕಳ್ಳತನ ಪ್ರಕರಣದ ವಾರಂಟ್ ಆರೋಪಿಯನ್ನು ಬಂಧಿಸಲಾಗಿದೆ.
ಬೆಳ್ತಂಗಡಿ ತಾಲೂಕಿನ ಚಿಬಿದ್ರೆ ನಿವಾಸಿ ವೀರಪ್ಪ ಗೌಡ ಮಗ ತಮ್ಮಯ್ಯ(35ವ) ಬಂಧಿತ. ಸೆ.28ರಂದು ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ ಈತ ತಿರುಗಾಡುತ್ತಿದ್ದವನನ್ನು ನೋಡಿ ಸುರತ್ಕಲ್ ಪೊಲೀಸ್ ಠಾಣೆಯ ಉಮೇಶ್ ವಶಕ್ಕೆ ಪಡೆದು ವಿಚಾರಿಸಿದಾಗ ತಾನು ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಚಿಬಿದ್ರೆ ನಿವಾಸಿ ಎಂದು ತಿಳಿಸಿದ್ದ. ಅದರಂತೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ ಸುರತ್ಕಲ್ ಪೊಲೀಸ್ ಠಾಣೆಗೆ ತೆರಳಿ ವಿಚಾರಿಸಿದಾಗ ವಾರಂಟ್ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ತಮ್ಮಯ್ಯ ಎಂದು ತಿಳಿದುಬಂದಿದೆ.
ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಮತ್ತು ಉಪ ನೀರಿಕ್ಷಕರು ಸಮರ್ಥ್ ಆರ್ ಗಾಣಿಗೇರವರ ಮಾರ್ಗದರ್ಶನದಲ್ಲಿ ಸಿಬ್ಬಂದಿ ವ್ರಷಭ, ಚರಣ್ ರಾಜ್, ಗೋವಿಂದರಾಜ್, ಜಗದೀಶ್ ಅವರು ಬಂಧಿಸಿ ಸೆ.29ರಂದು ಸುಳ್ಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.