ಬೆಳ್ತಂಗಡಿ: ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್, ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ 2025-26ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ಕಾರ್ಯಚಟುವಟಿಕೆಗಳ ಕಾರ್ಯಕ್ರಮ ಉದ್ಘಾಟನೆ ನಡೆಯಿತು. ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ರಾಷ್ಟ್ರೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿ ಬಿ.ಎ. ಶಮಿವುಲ್ಲ, ಸಹ ಸಂಯೋಜನಾಧಿಕಾರಿ ಸತೀಶ್ ಸಾಲ್ಯಾನ್, ಅಂಬಿಕಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಶ್ಮಿತಾ ತೃತೀಯ ಬಿ.ಎ ಕಾರ್ಯಕ್ರಮ ನಿರೂಪಿಸಿದರು, ವಾಣಿಜ್ಯಶಾಸ್ತ್ರ ಉಪನ್ಯಾಸಕ ಬಿ. ಎ. ಶಮಿವುಲ್ಲಾ ಸ್ವಾಗತಿಸಿ, ಕನ್ನಡ ಉಪನ್ಯಾಸಕ ಸತೀಶ್ ಸಾಲ್ಯಾನ್ ಧನ್ಯವಾದವಿತ್ತರು.