Site icon Suddi Belthangady

ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಚರ್ಚಾ ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ಫಾತಿಮಾತ್ ರಾಫಿಯಾ ಪ್ರಥಮ

ಉಜಿರೆ: 2025-26ನೇ ಸಾಲಿನ ಅಂತರ್ ಕಾಲೇಜು ಪದವಿ ವಿದ್ಯಾರ್ಥಿಗಳಿಗೆ ಸೆ. 30ರಂದು ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿಯಲ್ಲಿ ಆಯೋಜಿಸಿದ “ ಸಹಕಾರಿ ಚಳುವಳಿಯ ಭವಿಷ್ಯಕ್ಕೆ, ಸಹಕಾರಿ ಶಿಕ್ಷಣದಲ್ಲಿ ಹೂಡಿಕೆ ಮಾಡುವುದು ನಿರ್ಣಾಯಕ ಎಂಬ ಚರ್ಚಾಸ್ಪರ್ಧೆಯಲ್ಲಿ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ದ್ವಿತೀಯ ಬಿ.ಎಡ್. ಪ್ರಶಿಕ್ಷಣಾರ್ಥಿ ಫಾತಿಮಾತ್ ರಾಫಿಯಾ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇವರು ರಾಜ್ಯಮಟ್ಟದಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾನಿಲಯ ಮಟ್ಟದ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.

Exit mobile version