ಮುಂಡಾಜೆ: ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಡಾ. ವಾಣಿ ಸುಗುಣ ಕುಮಾರ್ ಅವರು ಶಿಬಿರಾರ್ಥಿಗಳನ್ನುದ್ದೇಶಿಸಿ, ‘ಜೀವನದಲ್ಲಿ ಯಶಸ್ವಿಯಾಗಲು ವಿದ್ಯೆಯೊಂದಿಗೆ ಅನೇಕ ಕೌಶಲ್ಯಗಳನ್ನು ಕಲಿಯಬೇಕು. ಮಹಿಳೆಯರು ಆತ್ಮಾಭಿಮಾನ ಬೆಳೆಸಿಕೊಳ್ಳಬೇಕು ಎಂದು ಕರೆಯಿತ್ತರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಬಿರ ನಿರ್ವಹಣಾ ಸಮಿತಿ ಜೊತೆ ಕಾರ್ಯದರ್ಶಿ ಮಸೂದ ವಹಿಸಿದ್ದರು. ವೇದಿಕೆಯಲ್ಲಿ ಅತಿಥಿಗಳಾಗಿ ಪೂರ್ಣಿಮಾ, ಜೊತೆ ಕಾರ್ಯದರ್ಶಿ, ಶಿಬಿರ ನಿರ್ವಹಣಾ ಸಮಿತಿ, ಉಪನ್ಯಾಸಕಿ ವಸಂತಿ ಉಪಸ್ಥಿತರಿದ್ದರು. ಶಿಬಿರಾರ್ಥಿ ತುಳಸಿ ಕಾರ್ಯಕ್ರಮದ ನಿರೂಪಣೆ ಮಾಡಿದರು. ಶಿಬಿರಾಧಿಕಾರಿ ನಮಿತಾ ಕೆ.ಆರ್. ಸ್ವಾಗತಿಸಿ, ಅಮೃತ ಎನ್. ಧನ್ಯವಾದವಿತ್ತರು.
ಮುಂಡಾಜೆ: ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ
