ಬೆಳ್ತಂಗಡಿ: ಮಂಗಳೂರು ನಿದ್ಯುತ್ ಸರಬರಾಜು ಕಂಪನಿ ನಿಯಮಿತ(MESCOM) ನೂತನ ಅಧ್ಯಕ್ಷರಿಗೆ ಅಧಿಕಾರ ವಹಿಸಿಕೊಂಡ ಮಾಜಿ ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಶುಭ ಹಾರೈದರು.
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್, ಪ್ರಮುಖರಾದ ಪ್ರವೀಣ್ ಹಳ್ಳಿ ಮನೆ, ನೇಮಿರಾಜ್ ಕಿಲ್ಲೂರು, ಇಸುಬು ಇಳಂತಿಲ, ಮಹಮದ್ ಶಾಫಿ ಕಾಶಿಪಟ್ಣ ಹಾಗೂ ಪ್ರಮುಖರು ಉಪಸ್ಥಿತರಿದ್ದರು.