ಕನ್ಯಾಡಿ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ( MESCOM) ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮಾಜಿ ವಿಧಾನ ಪರಿಷತ್ ಸದಸ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅವರಿಗೆ ನಡ ಕಾಂಗ್ರೆಸ್ ಗ್ರಾಮ ಸಮಿತಿಯಿಂದ ಶುಭ ಹಾರೈಸಿದರು. ನಡ ಕನ್ಯಾಡಿ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ ಜಾಕೀರ್ ಹುಸೇನ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಬಿ. ರಾಜಶೇಖರ್ ಅಜ್ರಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ, ಹಾಲಿ ಸದಸ್ಯ ಪ್ರವೀಣ್ ವಿ. ಜಿ., ಬಿ. ಮುನಿರಾಜ ಅಜ್ರಿ, ಬಿ. ವಿಠಲ ಶೆಟ್ಟಿ ಉಪಸ್ಥಿತರಿದ್ದರು.
Home ಇತ್ತೀಚಿನ ಸುದ್ದಿಗಳು ಕನ್ಯಾಡಿ: ಮೆಸ್ಕಾಂ ನೂತನ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅವರಿಗೆ ಶುಭ ಕೋರಿದ ನಡ ಕಾಂಗ್ರೆಸ್...