






ಬೆಳ್ತಂಗಡಿ: ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಬೆಳ್ತಂಗಡಿ ಬಿಲ್ಲವ ಮಹಿಳಾ ವೇದಿಕೆ ಮತ್ತು ಯುವಬಿಲ್ಲವ ವೇದಿಕೆಯ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು. ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು, ಕಾರ್ಯದರ್ಶಿ ನಿತೀಶ್ ಹೆಚ್., ನಿರ್ದೇಶಕ ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ. ಕೆ. ಪ್ರಸಾದ್, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಸುಮತಿ ಪ್ರಮೋದ್, ಇತರ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.









