ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ)ಯಲ್ಲಿ ಅ.2ರಂದು ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶಾಲಾ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ಹಾಗೂ ಗುಂಪುಗಾಯನ ಹಾಡಲಾಯಿತು.
ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದಿನದ ಮಹತ್ವದ ಕುರಿತು ಮಾತನಾಡಿದರು. ವಿದ್ಯಾರ್ಥಿನಿ ಪ್ರಣಮ್ಯ ಕಾರ್ಯಕ್ರಮ ನಿರೂಪಿಸಿದರು.