Site icon Suddi Belthangady

ವಿದ್ವತ್ ಪಿ.ಯು. ಕಾಲೇಜಿನಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ – ಮಹಾತ್ಮ ಗಾಂಧೀಜಿಯವರ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಆದರ್ಶ ನಮಗೆ ದಾರಿದೀಪ: ಗಂಗಾಧರ ಇ. ಮಂಡಗಳಲೆ

ಗುರುವಾಯನಕೆರೆ: ಗಾಂಧೀಜಿಯವರ ಸತ್ಯ, ಅಹಿಂಸೆ ಮುಂತಾದ ಆದರ್ಶಗಳು ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ದೇಶ ಪ್ರೇಮ ನಮಗೆ ದಾರಿದೀಪವಾಗಿದ್ದು ಅದನ್ನು ನಮ್ಮ ಜೀವನದಲ್ಲಿ ಅನುಸರಿಸಿಕೊಂಡು ಮುನ್ನಡೆಯಬೇಕೆಂದು ವಿದ್ವತ್ ಪಿ.ಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ.ಇ. ಮಂಡಗಳಲೆ ತಿಳಿಸಿದರು. ಅವರು ವಿದ್ವತ್ ಪಿ.ಯು ಕಾಲೇಜಿನಲ್ಲಿ ಗಾಂಧಿಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆಯ ಮಹತ್ವವನ್ನು ತಿಳಿಸುತ್ತಾ ಈ ಮಾತುಗಳನ್ನಾಡಿದರು.

ಕಾರ್ಯಕ್ರಮವು ಕಾಲೇಜಿನ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ನಂತರ ಗಾಂಧೀಜಿಯವರ ಭಾವಚಿತ್ರಕ್ಕೆ ಸಂಸ್ಥೆಯ ಕಾರ್ಯದರ್ಶಿಯವರು, ಕಾಲೇಜಿನ ಶೈಕ್ಷಣಿಕ ನಿರ್ದೇಶಕರು, ಉಪನ್ಯಾಸಕ ವರ್ಗದವರು, ವಿದ್ಯಾರ್ಥಿ ಪ್ರತಿನಿಧಿಗಳು, ಪುಷ್ಪಾರ್ಚನೆ ಸಲ್ಲಿಸಿದರು. ನಂತರ ಗಾಂಧೀಜಿಯವರಿಗೆ ಪ್ರಿಯವಾದ ವೈಷ್ಣವ ಜಯತೋ ಮತ್ತು ರಘುಪತಿ ರಾಘವ ರಾಜಾರಾಮ್ ಭಜನೆಯನ್ನು ವಿದ್ಯಾರ್ಥಿಗಳು ಹಾಡಿದರು. ನಂತರ ಎಲ್ಲಾ ವಿದ್ಯಾರ್ಥಿಗಳು ದೇಶಭಕ್ತಿಗೀತೆಯನ್ನು ಹಾಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿಯವರಾದ ಪ್ರಜ್ವಲ್ ರೈ, ಪ್ರಾಂಶುಪಾಲರಾದ ಹರೀಶ್.ಕೆ.ಆರ್. ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕರಾದ ಹರೀಶ್ ಬಳಂಜ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Exit mobile version