Site icon Suddi Belthangady

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಗಾಂಧಿ ಜಯಂತಿ ಆಚರಣೆ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯ ಪ್ರಯುಕ್ತ, ಈ ಇಬ್ಬರು ರಾಷ್ಟ್ರ ನಾಯಕರ ಭಾವಚಿತ್ರದ ಮುಂದೆ ದೀಪ ಪ್ರಜ್ವಲಿಸಿ, ಪುಷ್ಪಾರ್ಚನೆ ಮಾಡಲಾಯಿತು.

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಮಾತನಾಡಿ, ‘ ಈ ದೇಶ ಅಹಿಂಸಾ ಸಿದ್ಧಾಂತದಲ್ಲಿ ಸ್ವಾತಂತ್ರ್ಯ ಗಳಿಸುವಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಹಾಗೂ ಸ್ವಾತ್ರಂತ್ರ್ಯ ಬಂದ ಬಳಿಕ ಅದನ್ನು ಉಳಿಸುವ ಹಾಗೂ ಸಮರ್ಥವಾಗಿ ದೇಶವನ್ನು ಮುನ್ನಡೆಸುವ ಮಹಾ ನಾಯಕನಾಗಿ ಕೀರ್ತಿಶೇಷ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಮುಖ್ಯರಾಗುತ್ತಾರೆ ಎನ್ನುತ್ತಾ,ಕಾಯ ಅಳಿದರೂ,ಅವರು ಮಾಡಿದ ಕಾಯಕದಿಂದ ಎಂದೆಂದಿಗೂ ಗಾಂಧೀಜಿ ಹಾಗೂ ಶಾಸ್ತ್ರಿಯವರು ಅಜರಾಮರರು ಎಂದು ಅವರು ಹೇಳಿದರು.

ಎಕ್ಸೆಲ್ ಪದವಿ ಪೂರ್ವ ಕಾಲೇಜು, ವಿದ್ಯಾ ಸಾಗರ ಕ್ಯಾಂಪಸ್ ನ ಪ್ರಾಂಶುಪಾಲ ಡಾ. ನವೀನ್ ಕುಮಾರ್ ಮರಿಕೆ, ಅರಮಲೆ ಬೆಟ್ಟ ಕ್ಯಾಂಪಸ್ ನ ಪ್ರಾಚಾರ್ಯ ಡಾ. ಪ್ರಜ್ವಲ್ ಕಜೆ, ಕ್ಯಾಂಪಸ್ ಮ್ಯಾನೇಜರ್ ಶಾಂತಿರಾಜ್ ಜೈನ್, ಉಪಪ್ರಾಂಶುಪಾಲ ರೋಹಿತ್, ಆಡಳಿತ ಮಂಡಳಿಯ ಸಹನಾ ಜೈನ್, ಶೈಕ್ಷಣಿಕ ಸಂಯೋಜಕಿ ನಿಶಾ ಪೂಜಾರಿ, ಪ್ರಾಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಪಾಲ್ಗೊಂಡರು.

Exit mobile version