ಕುವೆಟ್ಟು: ಸ. ಉ. ಹಿ. ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಸಾಮೂಹಿಕ ಪ್ರಾರ್ಥನೆ ಗೀತೆಗಳನ್ನು ಹಾಡಲಾಯಿತು.
ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಸಿರಾಜ್ ಎಂ. ಚಿಲಿಂಬಿ, ಎಸ್.ಡಿ.ಎಂ.ಸಿ. ಸದಸ್ಯ ಸಮೀರ್, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ, ಅಡುಗೆ ಸಿಬ್ಬಂದಿಯವರು, ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.