ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆಯನ್ನು ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ.ವಿ. ದೀಪ ಬೆಳಗಿಸಿ ಗಾಂಧೀಜಿಯವರ ಹಾಗೂ ಶಾಸ್ತ್ರೀಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಪುಷ್ಪ ನಮನ ಸಲ್ಲಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ಹಾಗೂ ಭಜನಾ ಕಾರ್ಯಕ್ರಮ ನಡೆಯಿತು.
ಧರ್ಮಸ್ಥಳ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ
