ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ವಾಣಿ ವಿದ್ಯಾ ಸಮ್ಮಾನ್ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ ಅ.7 ರಂದು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ನಡೆಯಲಿದೆ. ವಿಧಾನ ಪರಿಷತ್ ಶಾಸಕ ಎಸ್.ಎಲ್.ಭೋಜೇಗೌಡ ಉದ್ಘಾಟನೆ ಮಾಡಲಿದ್ದಾರೆ.
ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ನಾವೂರು ಆರೋಗ್ಯ ಕ್ಲಿನಿಕ್ ನ ಡಾ. ಪ್ರದೀಪ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ರಾಜೇಶ್ವರಿ ಹೆಚ್.ಹೆಚ್, ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ, ವಾಣಿ ಶಿಕ್ಷಣ ಸಂಸ್ಥೆಗಳ ಗೌರವಾಧ್ಯಕ್ಷ ಹೆಚ್ ಪದ್ಮ ಗೌಡ, ವಾಣಿ ಶಿಕ್ಷಣ ಸಂಸ್ಥೆಗಳ ಮಾಜಿ ಅಧ್ಯಕ್ಷ ಜಿ. ಸೋಮೇಗೌಡ, ವಾಣಿ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಉಪಸ್ಥಿತಿ ಇರಲಿದ್ದಾರೆ.