ಸಿಂದೂರ ಮಹಿಳಾ ವಿಭಾಗಕ್ಕೆ ಗಣ್ಯರಿಂದ ಮೆಚ್ಚುಗೆ

0

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಉದ್ಘಾಟನೆಗೊಂಡ ಸಿಂದೂರ ಮಹಿಳಾ ಚಿಕಿತ್ಸಾ ವಿಭಾಗಕ್ಕೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾ‌ರ್ ಮತ್ತು ಧಾರವಾಡ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವೈದ್ಯಕೀಯ ವಿಶ್ವವಿದ್ಯಾಲಯ ಉಪಕುಲಪತಿ ಡಾ. ನಿರಂಜನ್ ಕುಮಾರ್, ಅವರ ಪತ್ನಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವೈದ್ಯಕೀಯ ವಿಶ್ವವಿದ್ಯಾಲಯದ ಕಾರ್ಯನಿರ್ವಾಹಣ ನಿರ್ದೇಶಕಿ ಪದ್ಮಲತಾ ನಿರಂಜನ್, ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗಳ ಸಲಹಾ ಸಮಿತಿಯ ಅಧ್ಯಕ್ಷೆ ಸುಪ್ರಿಯಾ ಹರ್ಷೇಂದ್ರ ಕುಮಾ‌ರ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಹಣಕಾಸು ನಿರ್ದೇಶಕ ಡಿ. ನಿಶ್ಚಲ್ ಕುಮಾರ್ ಅವರು ಆಗಮಿಸಿದರು.

ಅವರು ಮಹಿಳಾ ವಿಭಾಗದ ಸೌಲಭ್ಯಗಳನ್ನು ಪರಿಶೀಲಿಸಿ, ಅದರ ವ್ಯವಸ್ಥೆಗಳ ಬಗ್ಗೆ ಹೃದಯಪೂರ್ವಕ ಮೆಚ್ಚುಗೆ ವ್ಯಕ್ತಪಡಿಸಿದರು. ಶಾಂತಿವನದ ಕಾರ್ಯದರ್ಶಿ ಸೀತಾರಾಮ ತೋಳಾಡಿತ್ತಾಯ ಹಾಗೂ ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಸಾದ್‌ ಶೆಟ್ಟಿ ಅವರು ಅತಿಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ, ನವೀಕರಿಸಲ್ಪಟ್ಟ ವಿಭಾಗದ ವೈಶಿಷ್ಟ್ಯಗಳ ಕುರಿತು ವಿವರಿಸಿದರು.

LEAVE A REPLY

Please enter your comment!
Please enter your name here