ಜಾಗತಿಕ ಕ್ರೀಡೋತ್ಸವದ ಪದಾಧಿಕಾರಿಗಳ ಪೂರ್ವಭಾವಿ ಸಭೆ

0

ಬೆಳ್ತಂಗಡಿ: ಅಖಿಲ ಭಾರತ ಬಿಲ್ಲವರ ಯೂನಿಯನ್ ರಿಜಿಸ್ಟರ್ಡ್ ಮಂಗಳೂರು ಇದರ ವತಿಯಿಂದ ಜಾಗತಿಕ ಬಿಲ್ಲವರ ಕ್ರೀಡೋತ್ಸವದ ಪದಾಧಿಕಾರಿಗಳ ಪೂರ್ವಭಾವಿ ಸಭೆ ಮಂಗಳೂರು ಓಷನ್ ಪರ್ಲ್ ಸಭಾ ಭವನದಲ್ಲಿ ಅ. 5ರಂದು ನಡೆಯಿತು.

ನಿವೃತ್ತ ಎಸ್.ಪಿ., ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ ಉದ್ಘಾಟಿಸಿ 2026 ಜನವರಿ 18ರಂದು ಮಂಗಳೂರು ನೆಹರು ಮೈದಾನದಲ್ಲಿ ನಡೆಯುವ ಜಾಗತಿಕ ಮಟ್ಟದ ಬಿಲ್ಲವ ಸಮಾಜದ ಮಹಿಳೆಯರು ಮತ್ತು ಮಹನೀಯರಿಗಾಗಿ ನಡೆಯುವ ಕ್ರೀಡಾಕೂಟದಲ್ಲಿ ಪ್ರತಿಯೊಬ್ಬರೂ ಭಾಗವಹಿಸಬೇಕೆಂದು ಕರೆ ನೀಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ.ಸುವರ್ಣ ರವರು ಸ್ವಾಗತಿಸಿ, ಪ್ರಸ್ತಾವಿಸುತ್ತಾ ಇದೊಂದು ಐತಿಹಾಸಿಕ ಸಮಾರಂಭ ಈ ಕ್ರೀಡಾಕೂಟದಲ್ಲಿ ರಾಷ್ಟ್ರ ಮತ್ತು ಅಂತರಾಷ್ಟ್ರ ಮಟ್ಟದ ಕ್ರೀಡಾಸ್ಪರ್ಧಿಗಳು ಭಾಗವಹಿಸಬೇಕೆಂದು ತಿಳಿಸಿದರು. ಕ್ರೀಡಾ ಪ್ರಧಾನ ಸಂಚಾಲಕ ಪುರುಷೋತ್ತಮ ಪೂಜಾರಿಯವರು ಕ್ರೀಡೆಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಪ್ರಧಾನ ಕಾರ್ಯದರ್ಶಿ ಜೀವನ್ ರವರು ವರದಿಯನ್ನು ಯಾಚಿಸಿದರು,ವೇದಿಕೆಯಲ್ಲಿ ಕ್ರೀಡಾ ಸಂಚಾಲಕ ಸದಾನಂದ ಪೂಜಾರಿ, ಮಹಿಳಾ ವಿಭಾಗದ ಅಧ್ಯಕ್ಷೆ ಸುಮಲತಾ ಎನ್ ಸುವರ್ಣ, ಉಪಾಧ್ಯಕ್ಷರುಗಳಾದ ಕೆ.ಟಿ. ಸುವರ್ಣ, ಲೋಕನಾಥ್ ಅಮೀನ್, ಕೋಶಾಧಿಕಾರಿ ಜಯಪ್ರಕಾಶ್, ಇತರ ಗಣ್ಯರು ಉಪಸ್ಥಿತರಿದ್ದರು. ಸಂಘಟನಾ ಕಾರ್ಯದರ್ಶಿ ಯೋಗೇಶ್ ಕುಮಾರ್ ಗೇರುಕಟ್ಟೆ, ಸಹಕರಿಸಿದರು.

ಸಮಾರಂಭದಲ್ಲಿ ಜಿಲ್ಲೆಯ ಬಿಲ್ಲವ ಸಮಾಜದ ಸಂಘಟನೆಗಳ ಪ್ರಮುಖರು, ದೇವಸ್ಥಾನಗಳ ಮುಖ್ಯಸ್ಥರು ಸಮಾಜದ ಬ್ಯಾಂಕುಗಳ ಅಧ್ಯಕ್ಷರುಗಳು, ಕ್ರೀಡಾಪಟುಗಳು, ರಾಜಕೀಯ, ಸಾಮಾಜಿಕ, ಮತ್ತು ಧಾರ್ಮಿಕ ಪ್ರಮುಖರು ಹಾಜರಿದ್ದರು.

LEAVE A REPLY

Please enter your comment!
Please enter your name here