ಬೆಳ್ತಂಗಡಿ: ತಾಲೂಕಿನ ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದ್ದು, ಈ ಶಾಲಾ ಆವರಣಕ್ಕೆ ಮೇಲ್ಟಾವಣಿ ಅಳವಡಿಸಲು ಅನುದಾನಕ್ಕೆ ಶಿಫಾರಸ್ಸು ಮಾಡುವಂತೆ ಮಂಗಳೂರಿನಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಮನವಿ ಸಲ್ಲಿಸಲಾಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಪ್ರಮುಖರಾದ ಪ್ರವೀಣ್ ಹಳ್ಳಿ ಮನೆ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರೇಜಿ ಜಾರ್ಜ್, ಶಾಲಾ ಆಡಳಿತ ಅಧಿಕಾರಿಗಳಾದ ಸಿಸ್ಟರ್ ಲಿಂಡ, ಸಿಸ್ಟರ್ ಮೇಲ್ವಿನ್, ಯುವ ಕಾಂಗ್ರೆಸ್ ಉಪಾಧ್ಯಕ್ಷ ಅರುಣ್ ಲೋಬೊ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.