Site icon Suddi Belthangady

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ)ಯಲ್ಲಿ ಅ.7ರಂದು ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಾಲ್ಮೀಕಿ ಜಯಂತಿಯ ಮಹತ್ವ ಹಾಗೂ ಹಿನ್ನೆಲೆಯ ಕುರಿತು 8ನೇ ತರಗತಿ ವಿದ್ಯಾರ್ಥಿನಿ ಅನರ್ಘ್ಯ ತಿಳಿಸಿ, 9ನೇ ತರಗತಿ ವಿದ್ಯಾರ್ಥಿನಿ ರಸಪ್ರಶ್ನೆ ಕೇಳಿದರು. ಶಾಲಾ ಹಿರಿಯ ಶಿಕ್ಷಕಿ ಶಾಂಟಿ ಜಾರ್ಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮ ಉದ್ಘಾಟಸಿದರು. ವಿದ್ಯಾರ್ಥಿ ಚಿಂತನ್ ಕಾರ್ಯಕ್ರಮ ನಿರೂಪಿಸಿದರು.

Exit mobile version