ಉಜಿರೆ: ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಪ್ರಯುಕ್ತ ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಸಮಿತಿ(POSH)ಯಿಂದ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಒಂದು ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಗಳಾಗಿ ಉಜಿರೆ ಎಸ್.ಡಿ.ಎಮ್ ಹಾಸ್ಪಿಟಲ್ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಪ್ರಿಯಾಂಕಾ ಜಯದೇವ್ ಅವರು ಈ ಉಪನ್ಯಾಸ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಅವರು ಮಹಿಳೆಯರಿಗೆ ಸಾಮಾನ್ಯವಾಗಿ ಕಾಡುವಂತಹ ಆರೋಗ್ಯ ಸಮಸ್ಯೆಗಳು ಮತ್ತು ಅದನ್ನು ತಡೆಗಟ್ಟುವ ಬಗ್ಗೆ ಮಾಹಿತಿಯನ್ನು ನೀಡಿದರು. ಕ್ಯಾನ್ಸರ್ ರೋಗದ ಲಕ್ಷಣಗಳು, ಮುಂಜಾಗ್ರತಾ ಕ್ರಮಗಳು ಮತ್ತು ಲಸಿಕೆಗಳ ಬಗ್ಗೆ ತಿಳಿಸಿದರು. ಉತ್ತಮ ಗುಣಮಟ್ಟದ ಮತ್ತು ಆರೋಗ್ಯಕರ ಆಹಾರ ಪದ್ದತಿಯನ್ನು ಅನುಸರಿಸುವಂತೆ ಕರೆ ನೀಡಿದರು. ವೇದಿಕೆಯಲ್ಲಿ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಸಮಿತಿ (POSH) ಮುಖ್ಯಸ್ಥೆ ಮೇರಿ ಸ್ಮಿತಾ ಉಪಸ್ಥಿತರಿದ್ದರು. ಮಹಿಳಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.