Site icon Suddi Belthangady

ಉಜಿರೆ: ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅ. 7ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಡಾ. ರವೀಶ್ ಪಡುಮಲೆ ಮತ್ತು ಡಾ. ಜಿ.ಪಿ. ಹೆಗಡೆ ಅವರು ಮಹರ್ಷಿ ವಾಲ್ಮೀಕಿಯವರ ಜೀವನದ ಆದರ್ಶಗಳು, ಮೌಲ್ಯಗಳು ಹಾಗೂ ರಾಮಾಯಣದ ಮೂಲಕ ಅವರು ನೀಡಿದ ಮಾನವೀಯ ಸಂದೇಶಗಳ ಬಗ್ಗೆ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಆದಿ ಕವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

Exit mobile version