ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಮತ್ತು ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದಲ್ಲಿ ಸಾಧನೆಗೈದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಅ. 12ರಂದು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಉಚ್ಚನ್ಯಾಯಾಲಯದ ನ್ಯಾಯಾವಾದಿ ಕರುಣಾಕರ ಪಾಂಬೇಲು ನಡೆಸಲಿದ್ದಾರೆ. ಅಧ್ಯಕ್ಷತೆಯನ್ನು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗೌಡರ ಯಾನೆ ಸೇವಾ ಸಂಘದ ಗೌರವಾಧ್ಯಕ್ಷ ಹೆಚ್. ಪದ್ಮಗೌಡ, ಕಿನ್ನಿಗೋಳಿ ಐಕಳ, ಪೊಂಪೈ ಕಾಲೇಜಿನ ನಿವೃತ್ತ ಸಹ ಪ್ರಾಧ್ಯಾಪಕ ನೇಮಿಚಂದ್ರ ಗೌಡ, ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಉಪಸ್ಥಿತರಿರುವರು.