ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಆದೇಶ ಮಾಡಿರುವುದನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಅ.13ಕ್ಕೆ ಮುಂದೂಡಲಾಗಿದೆ. ಗಡಿಪಾರು ಆದೇಶ ಪ್ರಶ್ನಿಸಿ ಮೊದಲು ಸರ್ಕಾರಕ್ಕೆ ಮೇಲ್ಮನವಿ ಸಲ್ಲಿಸಬೇಕು.
ಈಗ ಮಹೇಶ್ ಶೆಟ್ಟಿ ತಿಮರೋಡಿ ತಲೆಮರೆಸಿಕೊಂಡಿದ್ದಾರೆ. ನಿರೀಕ್ಷಣಾ ಜಾಮೀನಿಗೂ ಅರ್ಜಿ ಸಲ್ಲಿಸಿದ್ದಾರೆಂದು ಹೈಕೋರ್ಟ್ ಗೆ ಎ.ಜಿ. ಶಶಿಕಿರಣ್ ಶೆಟ್ಟಿ ಮಾಹಿತಿ ನೀಡಿದರು.ಗಡಿಪಾರು ಪ್ರಶ್ನಿಸಿ ಸರ್ಕಾರದ ಮಂದೆ ಮೇಲ್ಮನವಿ ಸಲ್ಲಿಸಬಹುದಲ್ಲವೇ? ಎಂದು ಮಹೇಶ್ ಶೆಟ್ಟಿ ತಿಮರೋಡಿ ಪರ ವಕೀಲರಿಗೆ ಹೈಕೋರ್ಟ್ ಪ್ರಶ್ನೆ ಮಾಡಿದೆ. ಇದಕ್ಕೆ ಪ್ರತಿಕ್ರಿಯಿಸಲು ಕಾಲಾವಕಾಶ ಕೋರಿದ ವಕೀಲರು ವಿಚಾರಣೆಯನ್ನು ಅ.13ಕ್ಕೆ ಹೈಕೋರ್ಟ್ ಏಕಸದಸ್ಯಪೀಠ ಮುಂದೂಡಿದೆ. ಈ ಹಿಂದಿನ ಮಧ್ಯಂತರ ಆದೇಶವನ್ನು ಹೈಕೋರ್ಟ್ ಮುಂದುವರಿಸಿದೆ.