ಧರ್ಮಸ್ಥಳ: ಗ್ರಾಮ ಪಂಚಾಯಿತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಸೆ. 30ರಂದು ಸೇವಾ ನಿವೃತ್ತಿ ಹೊಂದಿದ ದಿನೇಶ್ ಎಂ. ಇವರಿಗೆ ಗ್ರಾಮ ಪಂಚಾಯತ್ ವತಿಯಿಂದ ಬೀಳ್ಕೊಡುಗೆ ಸಮಾರಂಭ ಅ.9ರಂದು ಪಂಚಾಯತಿನ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲಾ ವಹಿಸಿದ್ದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್, ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್, ಧರ್ಮಸ್ಥಳ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ, ಧರ್ಮಸ್ಥಳ ಅನ್ನಪೂರ್ಣ ಛತ್ರದ ಮೆನೇಜರ್ ಸುಬ್ರಹ್ಮಣ್ಯ ಪ್ರಸಾದ್, ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರೀತಮ್ ಡಿ., ಧರ್ಮಸ್ಥಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಚಂದನ್ ಪ್ರಸಾದ್ ಕಾಮತ್, ಉಪಾಧ್ಯಕ್ಷ ಶ್ರೀನಿವಾಸ ರಾವ್ ವೇದಿಯಲ್ಲಿ ಉಪಸ್ಥಿತರಿದ್ದು ನಿವೃತ್ತರನ್ನು ಸನ್ಮಾನಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ದಿನೇಶ್ ರವರ ತಾಯಿ ತೇಜಮ್ಮ, ಪತ್ನಿ ದೇವಕಿ, ಮಕ್ಕಳಾದ ದೀಕ್ಷಿತ್, ದೀಪಕ್, ಗ್ರಾಮ ಪಂಚಾಯತ್ ಸದಸ್ಯರು, ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು, ಕ್ಷೇತ್ರದ ವಿವಿಧ ವಿಭಾಗದ ಮುಖ್ಯಸ್ಥರು, ಸಹಕಾರ ಸಂಘದ ನಿರ್ದೇಶಕರು, ಶಾಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಪಂಚಾಯತ್ ಸಿಬ್ಬಂದಿ, ಊರವರು ಹಾಜರಿದ್ದು ಶುಭ ಕೋರಿದರು.
ದಿನೇಶ್ ಎಂ. ಇವರು 1994ರಿಂದ ಧರ್ಮಸ್ಥಳ ಗ್ರಾಮ್ ಪಂಚಾಯಿತಿಯಲ್ಲಿ ಬಿಲ್ ಕಲೆಕ್ಟರ್, ಕ್ಲರ್ಕ್ ಕೆಲಸವನ್ನು ನಿರ್ವಹಿಸಿ 2012 ಮುಂಬಡ್ತಿ ಹೊಂದಿ ಗ್ರಾಮ ಪಂಚಾಯತಿ ಲೆಕ್ಕ ಸಹಾಯಕರಾಗಿ, ಹಾಗೂ 2020 ಗ್ರೇಡ್ ಒನ್ ಕಾರ್ಯದರ್ಶಿಯಾಗಿ ಪುತ್ತೂರು ತಾಲೂಕಿನ ಕಬಕ ಹಾಗೂ ಉಪ್ಪಿನಂಗಡಿಯಲ್ಲಿ ಸೇವೆ ಸಲ್ಲಿಸಿದರು. 2023ರಿಂದ ಧರ್ಮಸ್ಥಳ ಗ್ರೇಡ್ ಒನ್ ಕಾರ್ಯದರ್ಶಿಯಾಗಿ, 2024ರಿಂದ ಧರ್ಮಸ್ಥಳ, ಹಾಗೂ ಶಿಶಿಲ ಗ್ರಾಮ ಪಂಚಾಯಿತಿನಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.
ನಿವೃತ್ತ ಪಿಡಿಓ ಉಮೇಶ್ ಕೆ., ಜಿ. ಪ. ಮಾಜಿ ಅಧ್ಯಕ್ಷ ಕೊರಗಪ್ಪ ನಾಯ್ಕ, ನಿವೃತ್ತ ಆಡಳಿತಾಧಿಕಾರಿ ಡಾ. ಜಯಕೀರ್ತಿ ಜೈನ್, ಬಿ. ಭುಜಬಲಿ ಧರ್ಮಸ್ಥಳ ಶುಭ ಹಾರೈಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ಸ್ವಾಗತಿಸಿದರು. ಲೆಕ್ಕಸಹಾಯಕಿ ಪ್ರಮೀಳಾ ಸನ್ಮಾನ ಪತ್ರ ವಾಚಿಸಿದರು. ಸಿಬ್ಬಂದಿ ಡಾ. ದೇವಿಪ್ರಸಾದ್ ಬೊಲ್ಮ ಕಾರ್ಯಕ್ರಮ ನಿರೂಪಿಸಿ, ವಂದನಾ ಬಲ್ಲಾಳ್ ವಂದಿಸಿದರು.