ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಹೆಚ್.ಐ.ವಿ ಯ ಬಗ್ಗೆ ಮಾಹಿತಿ ಕಾರ್ಯಗಾರ ನಡೆಯಿತು. ಮುಖ್ಯ ಅತಿಥಿಯಾಗಿ ಶ್ರೀಧರ್ಮ ಪಾಲ್ ಆರೋಗ್ಯ ಸಲಹೆಗಾರರು ಸಾರ್ವಜನಿಕ ತಾಲೂಕು ಆಸ್ಪತ್ರೆ ಬೆಳ್ತಂಗಡಿ ಅವರು ಮಾಹಿತಿ ನೀಡಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಹೇಮಲತಾ ಎಂ. ಆರ್.
ಮಾರ್ಗದರ್ಶನದೊಂದಿಗೆ ಕಾರ್ಯಕ್ರಮ ಆಯೋಜನೆಗೊಂಡಿತು. ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
Home ಇತ್ತೀಚಿನ ಸುದ್ದಿಗಳು ಬೆಳ್ತಂಗಡಿ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೆಚ್.ಐ.ವಿ. ಕುರಿತು ಮಾಹಿತಿ ಕಾರ್ಯಗಾರ