ಬೆಳ್ತಂಗಡಿ: ದಯಾ ವಿಶೇಷ ಶಾಲೆಯಲ್ಲಿ ಅ. 11ರಂದು ವಿಶ್ವ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಅನಿಶಾ ಹಾಗೂ ಅವರ ಕುಟುಂಬದ ಸದಸ್ಯರು, ದಯಾ ವಿಶೇಷ ಶಾಲೆಯ ಆಪ್ತಸಮಾಲೋಚಕಿ ಮೆರಿನ್ ಅವರು ಉಪಸ್ಥಿತರಿದ್ದರು.
ಮೆರಿನ್ ಅವರು ಹೆಣ್ಣು ಮಕ್ಕಳ ದಿನದ ವೈಶಿಷ್ಟ್ಯತೆಯನ್ನು ತಿಳಿಸಿ, ವಿಶ್ವದಾದ್ಯಂತ ಹೆಣ್ಣು ಮಕ್ಕಳ ದಿನವನ್ನು ಆಚರಿಸುತ್ತಿರುವ ಉದ್ದೇಶ ಮತ್ತು ಈ ದಿನದ ಪ್ರಾಮುಖ್ಯತೆಯನ್ನು ತಿಳಿಸಿದರು. ನಂತರ ಶಾಲೆಯ ಎಲ್ಲಾ ಹೆಣ್ಣು ಮಕ್ಕಳಿಗೆ ಹೂವನ್ನು ನೀಡಿ ಹೆಣ್ಣು ಮಕ್ಕಳ ದಿನಾಚರಣೆಯ ಶುಭಾಶಯವನ್ನು ಕೋರಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಮತ್ತು ವಿಶೇಷ ಮಕ್ಕಳು ಉಪಸ್ಥಿತರಿದ್ದರು. ಮೆಲ್ವಿನ್ ಹಾಗೂ ಅನಿಶಾ ದಂಪತಿಗಳು ಮಕ್ಕಳಿಗೆ ಇಂದಿನ ವಿಶೇಷ ಭೋಜನದ ವ್ಯವಸ್ಥೆಯನ್ನು ಮಾಡಿದರು.