ಬೆಳ್ತಂಗಡಿ: ವೇಣೂರು ಗ್ರಾಮ ಪಂಚಾಯತ್ ಹೋರಾಟಗಾರ ಸದಸ್ಯ ಅನೂಪ್ ಜೆ.ಪಾಯಸ್ ಜಿಲ್ಲಾ ಉಸ್ತುವಾರಿ ಸಚಿವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಪಕ್ಷದ ಧ್ವಜ ನೀಡಿ ಮರಳಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡರು.
ಈ ವೇಳೆ ಮೆಸ್ಕಾಂ ನಿಗಮದ ನೂತನ ಅಧ್ಯಕ್ಷ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಕಾಂಗ್ರೆಸ್ ಮುಖಂಡ ಪದ್ಮರಾಜ್ ಸೇರಿದಂತೆ ಹಲವರ ಉಪಸ್ಥಿತಿಯಲ್ಲಿ ಮರಳಿ ಕಾಂಗ್ರೆಸ್ ಪಕ್ಷಕ್ಷೆ ಅನೂಪ್ ಜೆ. ಪಾಯಸ್ ಅವರನ್ನು ಪಕ್ಷದ ಧ್ವಜ ನೀಡಿ ಬರಮಾಡಿಕೊಳ್ಳಲಾಯಿತು.