ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ-ವಾಣಿ ಶಿಕ್ಷಣ ಸಂಸ್ಥೆ ರಾಷ್ಟ್ರ ಮಟ್ಟದಲ್ಲಿ ಗುರುತಿಸಲ್ಪಟ್ಟ ಸಂಸ್ಥೆ: ಪದ್ಮ ಗೌಡ-ಜೀವನದಲ್ಲಿ ಶಿಕ್ಷಣ ಅಗತ್ಯವಾಗಿಬೇಕು: ಕರುಣಾಕರ ಪಾಂಬೇಲು-ವಿದ್ಯಾರ್ಥಿಗಳು ಪುಸ್ತಕಗಳನ್ನು ಓದಬೇಕು: ನೇಮಿಚಂದ್ರ ಗೌಡ-ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಒಳ್ಳೆಯ ಶಿಕ್ಷಣ ನೀಡುತ್ತಿದ್ದೇವೆ: ಕುಶಾಲಪ್ಪ ಗೌಡ

0

ಬೆಳ್ತಂಗಡಿ: 2024-25ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಅಂತೆಯೇ ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದಲ್ಲಿ ಸಾಧನೆಗೈದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಅ.12 ರಂದು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದ ಕರ್ನಾಟಕ ಉಚ್ಚನ್ಯಾಯಾಲಯದ ನ್ಯಾಯವಾದಿ ಕರುಣಾಕರ ಪಾಂಬೇಲು ಮಾತನಾಡಿ ಕಠಿಣ ಶ್ರಮದಿಂದ ಇವತ್ತು ಪ್ರತಿಭಾ ಪುರಸ್ಕಾರ ಭಾಜನರಾಗಿದ್ದಾರೆ. ಪ್ರತಿಭೆಯನ್ನು ಗುರುತಿಸಿದಾಗ ಜೀವನದಲ್ಲಿ ಇನ್ನಷ್ಟು ಸಾಧನೆ ಮಾಡಬೇಕು. ಪ್ರತಿ ದಿನ ಶ್ರಮ ಪಟ್ಟರೆ ಜೀವನದಲ್ಲಿ ಸಾಧನೆ ಮಾಡಬಹುದು. ಗುರಿ ಇಟ್ಟುಕೊಂಡು ವಿದ್ಯಾಬ್ಯಾಸ ಮಾಡಬೇಕು. ಜೀವನದಲ್ಲಿ ಶಿಕ್ಷಣ ಅಗತ್ಯವಾಗಿ ಬೇಕು. ಒಳ್ಳೆಯ ವಿದ್ಯೆಯನ್ನು ಪಡೆದುಕೊಂಡರೆ ಒಳ್ಳೆಯ ಉದ್ಯೋಗವನ್ನು ತೆಗೆದುಕೊಳ್ಳಬಹುದು. ಜೀವನದಲ್ಲಿ ಒಳ್ಳೆಯ ಶಿಕ್ಷಣ ತೆಗೆದುಕೊಂಡರೆ ಸಮಾಜಕ್ಕೆ ಉತ್ತಮ ಕೊಡುಗೆಯನ್ನು ನೀಡಬಹುದು ಎಂದು ಹೇಳಿದರು.

ನಿವೃತ್ತ ಸಹ ಪ್ರಾಧ್ಯಾಪಕ ನೇಮಿಚಂದ್ರ ಗೌಡ ಮಾತನಾಡಿ ಸಂಘ ಮುಂದೆ ಬರಬೇಕಾದರೆ ಎಲ್ಲಾರು ಒಗ್ಗಟ್ಟಾಗಿ ಕೆಲಸ ಮಾಡಬೇಕು. ಸಂಘದ ಕಾರ್ಯಕ್ರಮಕ್ಕೆ ಹೆಚ್ಚಿನ ಜನರು ಬರಬೇಕು.ಸಂಘದಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು.ವಿಧ್ಯಾರ್ಥಿಗಳು ಹೆಚ್ಚಿನ ಪುಸ್ತಕಗಳು ಓದಬೇಕು.ವಿಧ್ಯಾರ್ಥಿಗಳು ಜೀವನದಲ್ಲಿ ಕಷ್ಟಪಟ್ಟರೆ ಜೀವನದಲ್ಲಿ ಯಶಸ್ಸನ್ನು ಕಾಣುತ್ತೇವೆ ಎಂದು ಹೇಳಿದರು.

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗೌರವಾಧ್ಯಕ್ಷ ಪದ್ಮ ಗೌಡ ಮಾತನಾಡಿ ಪ್ರತಿ ವರ್ಷದಂತೆ ನಮ್ಮ ಸಮಾಜದ ವಿದ್ಯಾರ್ಥಿಗಳಿಗೆ ಹಾಗೂ ಸಮಾಜ ಇತರ ಬೇರೆ ಬೇರೆ ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡಿದ ವ್ಯಕ್ತಿಗಳನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮವನ್ನು ಮಾಡುತ್ತಾ ಬರುತ್ತಿದ್ದೇವೆ. ಪ್ರತಿಭೆ ಪ್ರತಿ ಒಬ್ಬ ಮನುಷ್ಯನಲ್ಲಿ ಇರುತ್ತಾದೆ ಅದನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಸಂಘದ ವತಿಯಿಂದ ಸಮಾಜಮುಖಿ ಕೆಲಸವನ್ನು ಮಾಡುತ್ತಿದ್ದೇವೆ ಹಾಗೂ ಹಲವರಿಗೆ ಸಂಘದ ವತಿಯಿಂದ ಸಹಕಾರವನ್ನು ನೀಡುತ್ತಿದ್ದೇವೆ. ವಾಣಿ ಶಿಕ್ಷಣ ಸಂಸ್ಥೆ ರಾಷ್ಟ್ರ ಮಟ್ಟದಲ್ಲಿ ಗುರುತಿಸಲ್ಪಟ್ಟ ಸಂಸ್ಥೆ ಎಂದು ಪದ್ಮ ಗೌಡ ಹೇಳಿದರು.

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಮಾತನಾಡಿ ಹಿರಿಯರು ಶಿಕ್ಷಣಕ್ಕೆ ಒತ್ತು ಕೊಟ್ಟು ಆರು ವಿದ್ಯಾರ್ಥಿಗಳಿಂದ ಪ್ರಾರಂಭವಾದ ಸಂಸ್ಥೆ ಇವತ್ತು ಎರಡುವರೆ ಸಾವಿರ ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ವಾಣಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಬ್ಯಾಸ ಮಾಡುತ್ತಿದ್ದಾರೆ. ವಾಣಿ ಶಿಕ್ಷಣ ಸಂಸ್ಥೆ ಒಳ್ಳೆಯ ಶಿಕ್ಷಣ ನೀಡುತ್ತಿದೆ ಹಾಗೂ ಒಳ್ಳೆಯ ಫಲಿತಾಂಶ ಕೂಡ ಬರುತ್ತಿದೆ ಎಂದು ಹೇಳಿದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿಗಳಿಗೆ ಸನ್ಮಾನ:
2025-26 ನೇ ಸಾಲಿನಲ್ಲಿ ಜಿಲ್ಲಾ ಮಟ್ಟದ ಉತ್ತಮ ಉಪನ್ಯಾಸಕ ಪ್ರಶಸ್ತಿ ಪಡೆದ ಮಹಾಬಲ ಗೌಡ, 2025-26 ನೇ ಸಾಲಿನಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ವಿಜಯ ಕುಮಾರ್ ಮತ್ತು ಜಯ ಕೆ ಹಾಗೂ ಎನ್‌.ಸಿ.ಇ.ಆರ್.ಟಿ ನಡೆಸಿದ  ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ವಾಣಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ವಿಭಾ ಕೆ ಆರ್, ನಿವೃತ್ತ ಸೈನಿಕ ಅಶೋಕ್,  ಯೋಗಾಸನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ಮೋಹಿತ್, ಎಸ್‌.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಹಾಗೂ ಕ್ರೀಡೆ ಕ್ಷೇತ್ರದಲ್ಲಿ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ಕರ್ನಾಟಕ ಉಚ್ಚನ್ಯಾಯಾಲಯದ ನ್ಯಾಯವಾದಿ ಕರುಣಾಕರ ಗೌಡ ಪಾಂಬೇಲು ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಬೆಳ್ತಂಗಡಿ ಬ್ಲಾಕ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಗೌಡ, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ.ಎಮ್, ವಾಣಿ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷ ಸೋಮೇ ಗೌಡ, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆಯ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ, ಗೌಡರ ಯಾನೆ ಒಕ್ಕಲಿಗರ ಸಂಘದ ನಿರ್ದೇಶಕ ದಿನೇಶ್ ಕೊಯ್ಯೂರು, ಧರ್ಣಪ್ಪ ಗೌಡ, ಕೃಷ್ಣಪ್ಪ ಸವಣಾಲು, ವಸಂತ ನಡ, ಜಿಲ್ಲಾ ಮಾತೃ ಸಂಘದ ಸಂಘಟನಾ ಕಾರ್ಯದರ್ಶಿ ಗಣೇಶ್, ಸ್ಪಂದನಾ ಸೇವಾ ಸಂಘದ ಸಂಚಾಲಕ ಸೀತಾರಾಮ , ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಿಳಾ ವೇದಿಕೆಯ ಅಧ್ಯಕ್ಷ ಗೀತಾ ರಾಮಣ್ಣ ಗೌಡ, ನಿವೃತ್ತ ಸೈನಿಕ ಅಶೋಕ್ , ಕಾರ್ಯದರ್ಶಿ ಲೀಲಾ ಬೆಳಾಲು, ಉಪಸ್ಥಿತರಿದ್ದರು.

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿಜಯ್ ಕುಮಾರ್ ಅವರು ವಾಣಿ ಸಭಾ ಭವನಕ್ಕೆ 50 ಸಾವಿರ ಹಣವನ್ನು ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡರಿಗೆ ಹಸ್ತಾಂತರಿಸಿದರು.

ವಾಣಿ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥನೆ ಮಾಡಿದರು, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕೋಶಾಧಿಕಾರಿ ಯುವರಾಜ್ ಅನಾರು ಸ್ವಾಗತಿಸಿ, ಬೆಳ್ಳಿಯಪ್ಪ ಮತ್ತು ವಿಜೇತಾ ಕಾರ್ಯಕ್ರಮ ನಿರೂಪಿಸಿ, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕಾರ್ಯದರ್ಶಿ ಗಣೇಶ್ ಗೌಡ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here