Site icon Suddi Belthangady

ಮೈಸೂರು ವಿಭಾಗ ಮಟ್ಟದ ಹೊನಲು ಬೆಳಕಿನ ಬಾಲಕಿಯರ ವಾಲಿಬಾಲ್ ಪಂದ್ಯಾಟ-ಬಂದಾರು ಸ.ಉ. ಹಿ.ಪ್ರಾ. ಶಾಲೆಯ ಬಾಲಕಿಯರ ತಂಡ ದ್ವಿತೀಯ

ಬಂದಾರು: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಮಂಗಳೂರು ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳು, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಸಂಯುಕ್ತ ಆಶ್ರಯದಲ್ಲಿ ಅ. 10,11ರಂದು ಮುಂಡಾಜೆ ವಿವೇಕಾನಂದ ಕ್ರೀಡಾಂಗಣದಲ್ಲಿ ನಡೆದ 14ನೇ ವಯೋಮಾನದ ಬಾಲಕಿಯರ ಮೈಸೂರು ವಿಭಾಗ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪ್ರಶಸ್ತಿ ತನ್ನದಾಗಿಸಿಕೊಂಡಿತು. ಬಂದಾರು ಶಾಲೆಯ ಕ್ರೀಡಾಪಟುಗಳಾದ ರಕ್ಷಿತಾ, ಅತಿಶ್ರೀ, ಸಿಂಚನ, ಧನ್ಯಶ್ರೀ ಅವರು ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

Exit mobile version