ಬೆಂಗಳೂರು: ಗಡಿಪಾರು ಆದೇಶ ತಡೆ ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಂಡಿದೆ.
ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ರಿಟ್ ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಪೀಠ ಆದೇಶ ಕಾಯ್ದಿರಿಸಿದೆ. ಅಲ್ಲದೇ, ಹೈಕೋರ್ಟ್ ಆದೇಶದವರೆಗೆ ಬಲವಂತದ ಕ್ರಮ ಬೇಡ, ಮುಂದಿನ ಆದೇಶದವರೆಗೆ ಗಡಿಪಾರು ಜಾರಿಗೊಳಿಸದಂತೆ ಹೈಕೋರ್ಟ್ ಸೂಚಿಸಿದೆ.