ಬೆಳಾಲು: ಮಾಯ ಶ್ರೀ ಮಾಯ ಮಹೇಶ್ವರ ಭಜನಾ ಮಂಡಳಿಯ ಆಶ್ರಯದಲ್ಲಿ ಪ್ರತಿ ವರ್ಷದಂತೆ ದೀಪಾವಳಿ ಹಬ್ಬದ ಪ್ರಯುಕ್ತ 43ನೇ ವರ್ಷದ ಕ್ರೀಡಾ ಕೂಟ ಅ. 23ರಂದು ಮಾಯ ಮಹಾದೇವ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.
ಬೆಳಿಗ್ಗೆಯಿಂದ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಗೈದ ಸಾಧಕರಿಗೆ ಸನ್ಮಾನ, ಬೆಳಾಲು ಗ್ರಾಮದಲ್ಲಿ ಎಸ್. ಎಸ್. ಎಲ್. ಸಿ ಮತ್ತು ಪಿ.ಯು.ಸಿ. ಯಲ್ಲಿ 2024-25ನೇ ಸಾಲಿನಲ್ಲಿ ಸಾಧನೆ ಗೈದ ವಿದ್ಯಾರ್ಥಿಗಳಿಗೆ ಗೌರವ ಪುರಸ್ಕಾರ ನಡೆಯಲಿದೆ ಎಂದು ಭಜನಾ ಮಂಡಳಿ ಅಧ್ಯಕ್ಷ ಹರೀಶ್ ಆಚಾರ್ಯ ಕುದ್ರಾಲು ತಿಳಿಸಿದ್ದಾರೆ.