Site icon Suddi Belthangady

ರಾಜ್ಯಮಟ್ಟದ ಸ್ಪೆಲ್ ಬಿ ಸ್ಪರ್ಧೆ: ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಮಂಜೊಟ್ಟಿ ರಝಾ ಗಾರ್ಡನ್ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ಎರಡನೇ ತರಗತಿಯ ಮೊಹಮ್ಮದ್ ಶಮ್ಮಾಝ್ ಮತ್ತು ಮೊಹಮ್ಮದ್ ಶಯಾನ್ ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಸ್ಪೆಲ್ ಬಿ ಸ್ಪರ್ಧೆಯಲ್ಲಿ ಆಯ್ಕೆಯಾಗಿ ತಮಿಳುನಾಡಿನ ಚೆನ್ನೈಯಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪೆಲ್ ಬಿ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಹಾಗೂ ನಾಲ್ಕನೇ ತರಗತಿಯ ಮೊಹಮ್ಮದ್ ರಾಫಿದ್ ಮತ್ತು ಮೊಹಮ್ಮದ್ ಐಮನ್ ಈ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯಮಟ್ಟದಲ್ಲಿ ಬಹುಮಾನವನ್ನು ಪಡೆದಿರುತ್ತಾರೆ. ಶಾಲೆಯ ಹೆಸರನ್ನು ರಾಷ್ಟ್ರಮಟ್ಟದಲ್ಲಿ ಮಿಂಚುವಂತೆ ಮಾಡಿದ ಈ ವಿದ್ಯಾರ್ಥಿಗಳು ಶಾಲಾ ಆಡಳಿತ ಟ್ರಸ್ಟ್, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದ ಅಭಿನಂದನೆಗೆ ಪಾತ್ರರಾಗಿದ್ದಾರೆ.

Exit mobile version