ಬಳಂಜ: ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆಯ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ನಡೆಸಲಾದ ಶಾಶ್ವತ ಕಾಮಗಾರಿಗಳ ಸಮರ್ಪಣಾ ಕಾರ್ಯಕ್ರಮ ಹಾಗೂ ಅನಿಲ್ ನಾಯ್ಗ ಅಟ್ಲಾಜೆ ಅವರ ಸ್ಮರಣಾರ್ಥ ಯುವ ಉದ್ಯಮಿ ಅಶ್ವಥ್ ಹೆಗ್ಡೆ ಬಳಂಜ ಅವರು ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ 15 ಲಕ್ಷ ರೂಪಾಯಿ ವೆಚ್ಚದಲ್ಲಿ ಅಳವಡಿಸಿದ ವೆಟ್ರ ಫೈಡ್ ಟೈಲ್ಸ್ ಮತ್ತು ನೆಲಹಾಸು ಅಳವಡಿಕೆ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮ ಮತ್ತು ಹಳೆ ವಿದ್ಯಾರ್ಥಿಗಳ ಸಮ್ಮಿಲನ ಸಮಾರಂಭ ಅ. 19ರಂದು ಬಳಂಜ ಶಾಲೆಯಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ನೆರವೇರಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಯುವ ಉದ್ಯಮಿ ಅಶ್ವಥ್ ಹೆಗ್ಡೆ ಬೆಂಗಳೂರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದು, ಈ ಶಾಲೆಯಲ್ಲಿ ಕಲಿತು ವಿವಿಧ ಕಡೆಗಳಲ್ಲಿ ಉದ್ಯೋಗ ಪಡೆದು ನೆಲೆಸಿರುವ ಎಲ್ಲಾ ಹಳೆ ವಿದ್ಯಾರ್ಥಿಗಳನ್ನು ಒಟ್ಟು ಸೇರಿಸಿ ಚಿಂತನ ಮಂಥನ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ಹಳೆ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರ ಶೇಖರ್ ಪಿ.ಕೆ. ಮತ್ತು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್.ವೈ.ಚಂದ್ರಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.