Site icon Suddi Belthangady

ಉಜಿರೆ: ಎಸ್.ಡಿ.ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಸೈಬರ್ ಭದ್ರತೆ ಕುರಿತು ಉಪನ್ಯಾಸ

ಉಜಿರೆ: ಎಸ್.ಡಿ.ಎಂ ಪಾಲಿಟೆಕ್ನಿಕ್‌ನ ಕಂಪ್ಯೂಟರ್ ಸೈನ್ಸ್ ವಿಭಾಗವು 2025ರ ಅ. 11ರಂದು “ಸೈಬರ್ ಭದ್ರತೆ” ಬಗ್ಗೆ ಒಂದು ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಮೋಹನ್ ನಾಯ್ಕ್ ಆರ್. ಅವರು ಮಾತನಾಡಿದರು.

ಅವರು ಇಂದಿನ ಡಿಜಿಟಲ್ ಜಗತ್ತಿನಲ್ಲಿ ಸೈಬರ್ ಭದ್ರತೆ ಎಷ್ಟು ಮುಖ್ಯ ಎಂಬುದನ್ನು ತಿಳಿಸಿದರು. ಬೇರೆ ಬೇರೆ ರೀತಿಯ ಸೈಬರ್ ಅಪಾಯಗಳು (Cyber Threats) ಮಾಹಿತಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳುವ ಉತ್ತಮ ಮಾರ್ಗಗಳು (Data Protection Strategies), ಆನ್‌ಲೈನ್‌ನಲ್ಲಿ ಸುರಕ್ಷಿತವಾಗಿ ಇರಲು ನಾವು ಅನುಸರಿಸಬೇಕಾದ ಉತ್ತಮ ನಡೆಗಳು (Ethical Practices)
ವಿದ್ಯಾರ್ಥಿಗಳು ಸೈಬರ್ ಅಪಾಯಗಳಿಂದ ತಮ್ಮನ್ನು ಹೇಗೆ ರಕ್ಷಿಸಿಕೊಳ್ಳಬಹುದು ಎಂಬುದರ ಬಗ್ಗೆ ಉಪಯುಕ್ತ ಮಾಹಿತಿ ನೀಡಿದರು.

ಕಾರ್ಯಕ್ರಮದ ವೇದಿಕೆಯ ಮೇಲೆ ಎಸ್.ಡಿ.ಎಂ ಪಾಲಿಟೆಕ್ನಿಕ್‌ನ ಪ್ರಾಂಶುಪಾಲ ಸಂತೋಷ್, ವ್ಯವಸ್ಥಾಪಕ ಚಂದ್ರನಾಥ್ ಜೈನ್ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ದಿನೇಶ್ ಅವರು ಹಾಜರಿದ್ದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕಿ ರೇನೀಟಾ ಫರ್ನಾಂಡಿಸ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

Exit mobile version