Site icon Suddi Belthangady

ಉಜಿರೆ: ಪುರಂದರ ಗೌಡರ ವೈದ್ಯಕೀಯ ಚಿಕಿತ್ಸೆಗೆ ನೆರವು

ಬೆಳ್ತಂಗಡಿ: ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್, ತಾಲೂಕು ಒಕ್ಕಲಿಗ ಗೌಡರ ಸಂಘ ಮತ್ತು ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಹಯೋಗದೊಂದಿಗೆ ಅ.12ರಂದು ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿರುವ ಉಜಿರೆ ಗ್ರಾಮದ ಬಜಿಲ್ ಮಾರು ನಿವಾಸಿಯಾಗಿರುವ ಪುರಂದರ ಗೌಡ ಅವರ ವೈದ್ಯಕೀಯ ಚಿಕಿತ್ಸೆಗಾಗಿ ಹಣಕಾಸಿನ ನೆರವನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್‌ನ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು, ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರೆ ಕ್ರೆಡಿಟ್ ಸೌಹಾರ್ದ ಸಹಕಾರಿಯ ಅಧ್ಯಕ್ಷ ರಂಜನ್ ಜಿ. ಗೌಡ ಬೆಳ್ತಂಗಡಿ ತಾಲೂಕು ಒಕ್ಕಲಿಗ ಸೇವಾ ಟ್ರಸ್ಟ್‌ನ ಕಾರ್ಯಧ್ಯಕ್ಷರಾದ ಶ್ರೀನಿವಾಸ ಗೌಡ ಬೆಳಾಲು ಹಾಗೂ ಜಯಂತ ಗೌಡ ಗುರಿಪಳ್ಳ, ಕಾರ್ಯಾಧ್ಯಕ್ಷರು ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮತ್ತು ಭರತ್ ಕುಮಾರ್ ಗೌಡ ಬಂಗಾಡಿ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ಹಾಗೂ ಟ್ರಸ್ಟ್ ಸದಸ್ಯರುಗಳಾದ, ವಸಂತ ಗೌಡ ಮರಕಡ -ವಕೀಲರು, ನವೀನ್ ಗೌಡ-ವಕೀಲರು, ಕಿಶೋರ್ ಗೌಡ ವಳಂಬ್ರ, ದಿನೇಶ್ ಗೌಡ ಕೊಯ್ಯುರು, ಹಾಗೂ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ದಿನೇಶ್ ಗೌಡ ಕಲ್ಲಾಜೆ ಉಪಸ್ಥಿತರಿದ್ದರು.

Exit mobile version